ಶಾಸಕ ಯತ್ನಾಳ್ʼಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

Date:

ಶಾಸಕ ಯತ್ನಾಳ್ʼಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಬಿಜೆಪಿಯ ಬಂಡಾಯದ ಬೇಗುದಿ ದೊಡ್ಡಮಟ್ಟದಲ್ಲಿ ತಾರಕ್ಕೇರ್ತಿದೆ, ರಾಜ್ಯಾಧ್ಯಕ್ಷ ವಿಜಯೇಂದ್ರ‌ ಟೀಂ vs ಯತ್ನಾಳ್ ಟೀಂ ನಡುವಿನ ಮುಸುಕಿನ ಗುದ್ದಾಟ ಜೋರಾಗ್ತಿದೆ. ಇದರ ಬೆನ್ನಲ್ಲೇ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ.
ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ.
ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...