ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ಸುಧಾಕರ್ ರಾಜೀನಾಮೆ ನೀಡಲು ತೆರಳಿದ್ದ ಸಂದರ್ಭದಲ್ಲಿ ನಜೀರ್ ಅಹಮದ್ ಮತ್ತು ಇತರರು ತಮ್ಮನ್ನು ಅಡ್ಡಗಟ್ಟಿ ಬಲವಂತವಾಗಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವುದಾಗಿ ಸುಧಾಕರ್ ದೂರು ನೀಡಿದ್ದರು.
ದೂರಿನ ಸಂಬಂಧ ಸುಧಾಕರ್ ಅವರ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸುಧಾಕರ್ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡು ಸಾಕ್ಷ್ಯಾಧಾರ ಸಂಗ್ರಹಿಸಿ ಆರೋಪಿತರ ವಿಚಾರಣೆ ನಡೆಸಲಾಗುವುದು ಎಂದು ಹೇಳಲಾಗಿದೆ.