ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಕೊನೆಗೂ ಆರೋಪಿ ಅರೆಸ್ಟ್

Date:

ಮಂಡ್ಯ: ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು,
ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು.
ಈ ವೇಳೆ ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಕೊಲೆಗಾರ ಎಂದು ದೀಪಿಕಾ ಪತಿ ಲೋಕೇಶ್ ಆರೋಪ ಮಾಡಿದ್ದರು. ಈ ಅನುಮಾನದಿಂದ ನಾಪತ್ತೆಯಾಗಿದ್ದ ನಿತೀಶ್‌ನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಿತೀಶ್‌ನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...