ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಜಾರಿಗೊಳಿಸಲಾಗುತ್ತದೆ.
ಈ ಯೋಜನೆಯಡಿ ರಾಜ್ಯದ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ 11 ಪಾಲಿಟೆಕ್ನಿಕ್ಗಳನ್ನು ಮಾದರಿ ಶಿಕ್ಷಣ ಸಂಸ್ಥೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮನೋಭಾವ ಬೆಳೆಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಬೋಧಕ ಸಿಬ್ಬಂದಿಯ ಕೊರತೆಯನ್ನು ನಿವಾರಿಸಲು ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಒದಗಿಸಲಾಗುತ್ತದೆ.
ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್ ಹಾಗೂ 3 ಇಂಜಿನಿಯರಿಂಗ್ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಇದಲ್ಲದೆ ರಾಜ್ಯದಾದ್ಯಂತ ಹೊಸ ಕಾಲೇಜುಗಳನ್ನು ಸ್ಥಾಪಿಸಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮಷಿನ್ ಲರ್ನಿಂಗ್ ಸೇರಿದಂತೆ ತಾಂತ್ರಿಕ ಕೋರ್ಸ್ಗಳನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...