ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ!

Date:

ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ!

ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನಡೆದಿದೆ. ಸುನಿಲ್ ಲಮಾಣಿ (25) ಆತ್ಮಹತ್ಯೆಗೆ ಶರಣಾದ ಚಾಲಕನಾಗಿದ್ದು,
ಇತ್ತೀಚೆಗೆ ಶಾಸಕ ಚಂದ್ರು ಲಮಾಣಿ ಖರೀದಿಸಿದ್ದ ನಿವಾಸದಲ್ಲೇ ಸುನಿಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಜು ಮೃತ ಸುನಿಲ್‌ ಅವರು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹವಾಗಿದ್ದು, ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...