ಶಿವಣ್ಣ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರು ಇತ್ತೀಚಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ ಕುಟುಂಬದಿಂದ ಸ್ಪಷ್ಟನೆ ಸಿಕ್ಕಿದೆ.
ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಣ್ಣ ಅಭಿಮಾನಿಗಳು ಶಿವಣ್ಣ ಬೇಗ ಚೇತರಿಸಿಕೊಂಡು ಬರಲಿ ಎಂದು ದೇವರ ಮೊರೆ ಹೋಗಿದ್ದರು. ಹೀಗಾಗಿ ಈಗ ಎಲ್ಲರಿಗೂ ಶಿವಣ್ಣ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟು ಸಿಹಿ ಸುದ್ದಿ ನೀಡಿದ್ದಾರೆ.