ಶಿವಮೊಗ್ಗದಲ್ಲಿ ವಿಗ್ರಹ ಅವಮಾನ ಪ್ರಕರಣ: ಇಬ್ಬರು ಆರೋಪಿಗಳು ಬಂಧನ
ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗಣಪತಿ ಮತ್ತು ನಾಗದೇವರ ವಿಗ್ರಹಗಳಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸದ್ದಾಂ ಮತ್ತು ರೆಹಮತ್ ಉಲ್ಲಾ ಎಂದು ಗುರುತಿಸಲಾಗಿದೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪಿತ ಗಣಪತಿ ವಿಗ್ರಹಕ್ಕೆ ಕಾಲಿಟ್ಟು,
ನಾಗದೇವರ ಕಲ್ಲನ್ನು ಚರಂಡಿಗೆ ಎಸೆದ ಘಟನೆ ನಡೆದಿತ್ತು. ಇದರಿಂದ ಸ್ಥಳೀಯರಲ್ಲಿ ಆಕ್ರೋಶ ಎದ್ದಿದ್ದು, ಬಡಾವಣೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.