ಶಿವಮೊಗ್ಗ ಕ್ಷೇತ್ರದಲ್ಲಿ ಹಣ ಹಂಚುವಾಗಲೇ ಸಿಕ್ಕಿಬಿದ್ದ ಮುಖಂಡ !?

admin
1 Min Read

ಜಿದ್ದಾಜಿದ್ದಿನ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ನಾಳೆ ಮತದಾನ ನಡೆಯಲಿದ್ದು, ಇಂದು ಹಣದ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಜೆಡಿಎಸ್ ಮುಖಂಡರೊಬ್ಬರು ಸಿಕ್ಕಿಬಿದ್ದಿದ್ದಾರೆ. ಮಾಜಿ ಶಾಸಕರ ಪುತ್ರರಾಗಿರುವ ಜೆಡಿಎಸ್ ಮುಖಂಡ ಸುರಗಿತೋಪಿನ ಬಳಿ ಮತದಾರರಿಗೆ ಹಣ ಹಂಚುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಎಂಪಿಎಂ ಠಾಣೆ ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದ್ದಾರೆ.

ಈ ವೇಳೆ 1.39 ಲಕ್ಷ ರೂ. ನಗದು ಜಪ್ತಿ ಮಾಡಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ. ಅಲ್ಲದೆ, ಮಾಜಿ ಶಾಸಕರ ಆಪ್ತರೊಬ್ಬನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

Share This Article
Leave a Comment