ಪಕ್ಷವನ್ನು ಬಿಡಲು ಕೋಟಿಗಟ್ಟಲೆ ಹಣ ಪಡೆಯಲಾಗಿದೆ ಎಂದು ಹೇಳುವ ಸಿದ್ದರಾಮಯ್ಯನವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಹಣ ಮತ್ತು ಅಧಿಕಾರಕ್ಕಾಗಿ ನಾವು ಪಕ್ಷ ಬಿಟ್ಟಿದ್ದೇವೆ ಎಂದು ಹೇಳುವವರು ಅಧಿಕಾರ ಬಿಡಲು ಸಿದ್ಧವಾಗಿದ್ದರೆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.