ಶಿವಶ್ರೀ ಸ್ಕಂದಪ್ರಸಾದ್ ಜೊತೆ ಹಸೆಮಣೆ ಏರಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಿತು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರ ಸಮ್ಮುಖದಲ್ಲಿ ನಡೆದಿದೆ.
ಗಿರಿನಗರದ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮವಿದೆ. ಮಾ.9 ರಂದು ಬೆಳಗ್ಗೆ 10.30 ರಿಂದ 1.30ರವರೆಗೆ ಆರತಕ್ಷತೆ ಸಮಾರಂಭವು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ರಾಜಕೀಯದ ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.