ಶಿವಸುಂದರ್ ಮಹಿಳಾ ತಂಡಕ್ಕೆ ಬ್ಯಾಟಿಂಗ್ ಕೋಚ್

Date:

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್‌ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಶಿವ್ ಸುಂದರ್ ದಾಸ್ ಹೆಸರಿಸಲ್ಪಟ್ಟಿದ್ದಾರೆ. ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸದ ವೇಳೆ ದಾಸ್ ಮಾರ್ಗದರ್ಶನ ನೀಡಲಿದ್ದಾರೆ.

ಶಿವ್ ಸುಂದರ್ ದಾಸ್ ಭಾರತ ತಂಡದ ಪರ 2000-02ರ ವರೆಗೆ 23 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. 23 ಟೆಸ್ಟ್‌ ಪಂದ್ಯಗಳಲ್ಲಿ 34.89ರ ಸರಾಸರಿಯಂತೆ 1326 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಮತ್ತು 9 ಅರ್ಧ ಶತಕಗಳು ಸೇರಿವೆ.

‘ಇದೊಂದು ಒಳ್ಳೆಯ ಅನುಭವವಾಗಲಿದೆ. ನಾನು ಇದಕ್ಕಾಗಿ ಎದುರು ನೋಡುತ್ತಿದ್ದೇನೆ,’ ಎಂದು 43ರ ಹರೆಯದ, ಒಡಿಶಾ ತಂಡದ ಮಾಜಿ ನಾಯಕ ಶಿವ್ ಸುಂದರ್ ಪಿಟಿಐ ಜೊತೆಗೆ ಖುಷಿ ಹಂಚಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ದಾಸ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಬ್ಯಾಟಿಂಗ್‌ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

‘ನಾನು ಕಳೆದ 4-5 ವರ್ಷಗಳಿಂದ ಎನ್‌ಸಿಎಯಲ್ಲಿ ಬ್ಯಾಟಿಂಗ್‌ ಕೋಚ್ ಆಗಿದ್ದೇನೆ. ಈ ಅವಕಾಶ ನೀಡಿದ್ದಕ್ಕಾಗಿ ನಾನು ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ,’ ಎಂದು ದಾಸ್ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...