ಶಿವು ಉಪ್ಪಾರ ಸಾವಿನ ಪ್ರಕರಣದ ಕುರಿತು ಸಿಐಬಿ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಶಿವು ಉಪ್ಪಾರ ಸಾವಿನ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವು ಉಪ್ಪಾರ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಶಿವು ಉಪ್ಪಾರ ಮಾತನಾಡಿರುವ ವಿಡಿಯೋ ಗಮನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಗೋರಕ್ಷಣೆ ಹೋರಾಟ ಮಾಡುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಸಾವಿನ ಪ್ರಕರಣವನ್ನು ಸೂಕ್ತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.