ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ: ಆಕ್ಸಿಯಂ-4 ಉಡಾವಣೆ ಯಶಸ್ವಿ!
ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ಸಂಶೋಧನೆ ಕಾರ್ಯಕ್ರಮಗಳ ಇತಿಹಾಸದಲ್ಲಿ ಇವತ್ತು ಒಂದು ಹೊಸ ಮೈಲಿಗಲ್ಲಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ. ಭಾರತದ ಶುಭಾಂಶು ಶುಕ್ಲಾ,
ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ. ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.
ಈ ಕಾರ್ಯಾಚರಣೆಯನ್ನು ಮೂಲತಃ ಮೇ 29 ರಂದು ಉಡಾವಣೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ನಂತರ ಜೂನ್ 8, ನಂತರ ಜೂನ್ 10 ಮತ್ತು ಜೂನ್ 11 ಕ್ಕೆ ಮುಂದೂಡಲಾಯಿತು. ಏಕೆಂದರೆ, ಎಂಜಿನಿಯರ್ಗಳು ಫಾಲ್ಕನ್ -9 ರಾಕೆಟ್ನ ಬೂಸ್ಟರ್ಗಳಲ್ಲಿ ದ್ರವ ಆಮ್ಲಜನಕ ಸೋರಿಕೆಯನ್ನು ಪತ್ತೆ ಮಾಡಿದರು.
ಮತ್ತು ನಾಸಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಹಳೆಯ ರಷ್ಯಾದ ಮಾಡ್ಯೂಲ್ನಲ್ಲಿ ಸೋರಿಕೆಯನ್ನು ಸಹ ಪತ್ತೆ ಮಾಡಿತು. ಇವತ್ತು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಌಕ್ಸಿಯೋಂ ನೌಕೆ ಯನ್ನು ಹೊತ್ತು Falcon-9 rocket ನಭಕ್ಕೆ ಯಶಸ್ವಿಯಾಗಿ ಚಿಮ್ಮಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಇದ್ದಾರೆ.