No menu items!
24.8 C
Munich
Thursday, August 6, 2026

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ!

Must read

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ!

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಚೇರ್ಮನ್ ಸಿ.ಜೆ. ರಾಯ್ ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಅವರ ಬಂಗಲೆಯಲ್ಲಿ ನಡೆದಿದೆ.

ಪದೇಪದೇ ಐಟಿ ಇಲಾಖೆ ಅಧಿಕಾರಿಗಳ ದಾಳಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅವರು ಈ ಕೃತ್ಯಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ, ರಾಯ್ ಅವರು ತಮ್ಮ ಬಳಿ ಇದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಶೋಕ್‌ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article