ಶೋಭಕ್ಕ ತಾಳ್ಮೆಯಿಂದ ಇರಕ್ಕ ಎಂದ ಎಂ.ಬಿ. ಪಾಟೀಲ್ !? ಯಾಕೆ ಗೊತ್ತಾ ?

Date:

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವ ಎಂ.ಬಿ. ಪಾಟೀಲ್ ಶತಮೂರ್ಖ ಗೃಹಸಚಿವ ಎಂದು ಟೀಕಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ಇರಬೇಕು. ಅವರು ಹೆಣ್ಣುಮಕ್ಕಳು ಎಂದು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ. ನಾವು ವಿಜಯಪುರದವರು. ನಮಗೆ ಬೇರೆ ಪದಗಳು ಕೂಡ ಗೊತ್ತು ಎಂದು ಮೈಸೂರಿನಲ್ಲಿ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಾಯಲ್ಲಿ ಅಂತಹ ಪದಗಳು ಬರಬಾರದು. ಶೋಭಾ ಕರಂದ್ಲಾಜೆ ಹಿನ್ನೆಲೆ, ಸಂಸ್ಕಾರ ಜನರಿಗೆ ಗೊತ್ತಿದೆ. ಅದೇ ರೀತಿ ನಮ್ಮ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿಯ ಬಗ್ಗೆಯೂ ಜನರಿಗೆ ಗೊತ್ತಿದೆ. ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ತಕರಾರು ಇದ್ದರೆ ಶೋಭಾ ಕರಂದ್ಲಾಜೆಯವರು ಸಂಪುಟ ಉಪಸಮಿತಿಯ ಮುಂದೆ ಹೋಗಲಿ.ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...