ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

1 Min Read

ಮೈಸೂರು: ಭಾನುವಾರ ಪ್ರಧಾನಿ ಮೋದಿ ಅವರು ಮೈಸೂರಿಗೆ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ರಾಜಕೀಯ ಕಾರಣಕ್ಕೆ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಆರು ವರ್ಷಗಳಿಂದ ದಿಗ್ಗಜ ನಾಯಕರು ಪರಸ್ಪರ ಭೇಟಿಯಾಗಿರಲಿಲ್ಲ. ಮಾತುಕತೆಯೂ ಇರಲಿಲ್ಲ. ಈಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
ಇದು ಸೌಹಾರ್ದಯುತ ಭೇಟಿಯೋ ಅಥವಾ ರಾಜಕೀಯ ಭೇಟಿಯೋ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ, ಬನ್ರಿ ಪ್ರಸಾದ್ ಎಂದು ಸಿಎಂ ಕುಶಲೋಪರಿ ವಿಚಾರಿಸಿದರು. ಶ್ರೀನಿವಾಸ ಪ್ರಸಾದ್ ಬಂದ ಕೂಡಲೇ ಸಿಎಂ ಎದ್ದು ನಿಲ್ಲಲು ಮುಂದಾದರು. ಆಗ ಶ್ರೀನಿವಾಸ್ ಪ್ರಸಾದ್, ಬೇಡ ಬೇಡ.. ಕೂತುಕೊಳ್ಳಿ ಎಂದರು. ಈ ವೇಳೆ ಸಿಎಂ ಬಳಿ ಪ್ರಸಾದ್ ಆರೋಗ್ಯ ಸಮಸ್ಯೆ ಹೇಳಿಕೊಂಡರು. ‘ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ’ ಎಂದು ಸಿಎಂ ಸಲಹೆ ನೀಡಿದರು.

Share This Article