No menu items!
28.1 C
Munich
Friday, June 19, 2026

ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡುತ್ತೇವೆ!

Must read

ಬೆಂಗಳೂರು: ನಾವು ಶ್ರೀರಾಮಚಂದ್ರನ ಭಕ್ತರು, ನಾವು ಶ್ರೀರಾಮಚಂದ್ರನ ಪೂಜೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನ ಭಕ್ತರು, ನಾವು ಶ್ರೀರಾಮಚಂದ್ರನ ಪೂಜೆ ಮಾಡುತ್ತೇವೆ. ಕೇಂದ್ರ ಸಚಿವರುಗಳು ರಾಜಕೀಯ ಮಾತನಾಡುತ್ತಿದ್ದಾರೆ ಅಷ್ಟೇ. ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದು ಕಿಡಿಕಾರಿದರು.
ಇನ್ನೂ ನಾವು ಶ್ರೀರಾಮಚಂದ್ರನ ವಿರುದ್ಧವಿಲ್ಲ. ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡುತ್ತೇವೆ. ಭಜನೆ ಮಾಡುತ್ತೇವೆ. ರಾಮಮಂದಿರಕ್ಕೆ ನಮ್ಮದು ವಿರೋಧವಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಯಡಿಯೂರಪ್ಪನವರು ಆರೋಪಕ್ಕೆ ಕಿಡಿಕಾರಿದ ಅವರು, ಈಗ ಯಾಕೆ ಇವರು ಅಯೋಧ್ಯೆಗೆ ಹೋಗುತ್ತಿದ್ದಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ವಾ? ಇಲ್ಲೂ ಎಲ್ಲಾ ಪೂಜೆ ಮಾಡುತ್ತಿದ್ದಾರೆ. ಅಷ್ಟೇ ಎಂದು ಸಿಎಂ ತಿರುಗೇಟು ಕೊಟ್ಟರು.

- Advertisement -spot_img

More articles

- Advertisement -spot_img

Latest article