ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

Date:

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಶ್ರೀರಾಮನವಮಿ ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಆ ದಿನ ಎಲ್ಲಾ ಕಸಾಯಿಖಾನೆಗಳನ್ನು ಮುಚ್ಚುವಂತೆ ಜಿಬಿಎ ಸೂಚಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ. ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಬ್ಬದ ದಿನದ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಗರದಲ್ಲಿ ಯಾವುದೇ ಅಕ್ರಮ ಅಥವಾ ಅಸಭ್ಯ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಸಾರ್ವಜನಿಕರು ಮತ್ತು ವ್ಯಾಪಾರಿಗಳು ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...