ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿಮತ್ ಕರುಣರತ್ನೆ ಅವರನ್ನು ಪೊಲೀಸರು ಬಂಧಿಸಿದ ಪ್ರಸಂಗ ನಡೆದಿದೆ.
ಅವರು ಮದ್ಯಸೇವನೆ ಮಾಡಿ ತ್ರಿಚಕ್ರ ವಾಹನಕ್ಕೆ ಅಪಘಾತ ಮಾಡಿದ್ದರಿಂದ ಪ್ರಕರಣ ದಾಖಲಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ತ್ರಿಚಕ್ರ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಮೂವತ್ತರ ಹರೆಯದ ಕರುಣರತ್ನೆ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಅಲ್ಲಿನ ತೀರ್ಮಾನದ ಬಳಿಕ ಕ್ರಿಕೆಟ್ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ.
ಕರುಣರತ್ನೆ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನೆದುರಿಸಿದ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದರು.