ಶ್ರೀಶಾಂತ್ ಮೇಲೆ ಕಣ್ಣಿಟ್ಟಿವೆ ಆ ಎರಡು ದೊಡ್ಡ ಫ್ರಾಂಚೈಸಿಗಳು!

Date:

2013ರ ಇಂಡಿಯನ್ ಪ್ರೀಮಿಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ನಿಷೇಧಕ್ಕೊಳಗಾಗಿದ್ದ ವೇಗಿ ಎಸ್ ಶ್ರೀಶಾಂತ್, ಇದೀಗ ಮತ್ತೆ ಕ್ರಿಕೆಟ್​ಗೆ ಕಮ್​ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಇತ್ತ ಶ್ರೀಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದ ಬಳಿಕ ಬಿಸಿಸಿಐ ಶಿಕ್ಷೆ ಕಡಿತಗೊಳಿಸಿತ್ತು.
ಇದೀಗ ಸೈಯದ್ ಮುಷ್ತಾಕ್ ಆಲಿ ಟೂರ್ನಿ ಮೂಲಕ 7 ವರ್ಷಗಳ ಬಳಿಕ ಶ್ರೀಶಾಂತ್ ಕ್ರಿಕೆಟ್​ಗೆ ಮರಳಿದ್ದಾರೆ. ಇದರ ಬೆನ್ನಲ್ಲೇ ಶ್ರೀಶಾಂತ್ ಮುಂದಿ ಐಪಿಎಲ್ ಟೂರ್ನಿ ಆಡೋ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಇದೀಗ ಸೈಯದ್ ಮುಷ್ತಾಕ್ ಆಲಿ ಟೂರ್ನಿ ಮೂಲಕ 7 ವರ್ಷಗಳ ಬಳಿಕ ಶ್ರೀಶಾಂತ್ ಕ್ರಿಕೆಟ್​ಗೆ ಮರಳಿದ್ದಾರೆ. ಇದರ ಬೆನ್ನಲ್ಲೇ ಶ್ರೀಶಾಂತ್ ಮುಂದಿ ಐಪಿಎಲ್ ಟೂರ್ನಿ ಆಡೋ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
2021ನೇ ಐಪಿಎಲ್ ಟೂರ್ನಿಯಲ್ಲೂ ಅವರು ಕಣಕ್ಕಿಳಿಯುವ ನಿರೀಕ್ಷೆ ಇದೆ. ಹೀಗಾಗಿ, ವಿವಿಧ ಐಪಿಎಲ್ ತಂಡಗಳು ತಮ್ಮನ್ನು ಸಂಪರ್ಕಿಸುತ್ತಿವೆ ಎಂದು 37 ವರ್ಷದ ಶ್ರೀಶಾಂತ್ ಹೇಳಿಕೊಂಡಿದ್ದಾರೆ.
2021ನೇ ಐಪಿಎಲ್ ಟೂರ್ನಿಯಲ್ಲೂ ಅವರು ಕಣಕ್ಕಿಳಿಯುವ ನಿರೀಕ್ಷೆ ಇದೆ. ಹೀಗಾಗಿ, ವಿವಿಧ ಐಪಿಎಲ್ ತಂಡಗಳು ತಮ್ಮನ್ನು ಸಂಪರ್ಕಿಸುತ್ತಿವೆ ಎಂದು 37 ವರ್ಷದ ಶ್ರೀಶಾಂತ್ ಹೇಳಿಕೊಂಡಿದ್ದಾರೆ.
. ಶ್ರೀಶಾಂತ್ 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ 7 ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗಿದ್ದರು. ಈ ನಿಷೇಧ ಕಳೆದ ಸೆಪ್ಟೆಂಬರ್​ನಲ್ಲಿ ಕೊನೆಗೊಂಡಿತ್ತು. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ದೇಶೀಯ ಟಿ-20 ಟೂರ್ನಿಯಲ್ಲಿ ಕೇರಳ ತಂಡದಲ್ಲಿ ಸ್ಥಾನ ಪಡೆದು ಉತ್ತಮ ಪ್ರದರ್ಶನ ತೋರಿದ್ದಾರೆ.
ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಶ್ರೀಶಾಂತ್ ಅವರನ್ನು ಕಿಂಗ್ಸ್​ ಇಲೆವೆನ್ ಪಂಜಾಬ್ ಫ್ರಾಂಚೈಸಿ ಕೊಂಡುಕೊಳ್ಳುವ ಸಾಧ್ಯತೆ ಇದೆ. ಪಂಜಾಬ್ ತಂಡಕ್ಕೆ ಡೆತ್ ಓವರ್ ಸ್ಪೆಷಲಿಸ್ಟ್​ನ ಅಗತ್ಯವಿದ್ದು ಇದಕ್ಕೆ ಶ್ರೀಶಾಂತ್ ಸೂಕ್ತ.
ಇದರ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್​ ಕೂಡ ಶ್ರೀಶಾಂತ್ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ. ಇವರು ಇನ್​ಸ್ವಿಂಗ್ – ಔಟ್​ಸಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದು, ಠಾಕೂರ್ ಅಥವಾ ಚಹಾರ್ ಇಂಜುರಿಗೆ ತುತ್ತಾದರೆ ಶ್ರೀಶಾಂತ್ ಉತ್ತಮ ಆಯ್ಕೆ ಆಗಿದ್ದಾರೆ.
ನಿಷೇಧದಿಂದಾಗಿ ಕ್ರಿಕೆಟ್ ಆಡದಿದ್ದ ಸಂದರ್ಭ ಬಾಲಿವುಡ್ ಸಹಿತ ಹಲವು ಚಿತ್ರರಂಗಗಳಲ್ಲಿ ಶ್ರೀಶಾಂತ್ ನಟಿಸಿದ್ದರು. ಹೀಗಾಗಿ ಅಲ್ಲಿನ ಪಾತ್ರಕ್ಕಾಗಿ ದೇಹತೂಕವನ್ನು ಹೆಚ್ಚಿಸಿಕೊಂಡಿದ್ದರು.
ಬಳಿಕ ನಿಷೇಧ ಮುಕ್ತರಾಗಿ ಕ್ರಿಕೆಟ್​ಗೆ ಮರಳುವ ಮುನ್ನ ಸುಮಾರು 20ಕೆಜಿ ದೇಹತೂಕವನ್ನು ಕರಗಿಸಿಕೊಳ್ಳಬೇಕಾಯಿತು ಎಂದು ಶ್ರೀಶಾಂತ್ ಹೇಳಿದ್ದಾರೆ.
2013ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್ ಬಳಿಕ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೊಳಾಗಿದ್ದರು. ಐಪಿಎಲ್ ಟೂರ್ನಿ 44 ಪಂದ್ಯಗಳಿಂದ ಶ್ರೀಶಾಂತ್ 40 ವಿಕೆಟ್ ಕಬಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...