ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ ಬಿಸಿ ಫಿಕ್ಸ್..!
ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ದರ ಮತ್ತೊಮ್ಮೆ ಪರಿಷ್ಕರಿಸಲು ನಿರ್ಧರಿಸಿದೆ. ಹಾಲಿನ ದರವನ್ನ ಹೆಚ್ಚಿಸುವ ಬಗ್ಗೆ ಕರ್ನಾಟಕ ಹಾಲು ಒಕ್ಕೂಟ ಸುಳಿವು ನೀಡಿದೆ. ಹೌದು 50 ಎಂಎಲ್ ಹೆಚ್ಚುವರಿ ಹಾಲನ್ನು ಹಿಂಪಡೆಯುವ ಜೊತೆಗೆ ದರ ಇಳಿಕೆ ಮಾಡಿ ಮತ್ತೆ ಹಾಲಿನ ದರ ಏರಿಕೆ ಮಾಡುವ ಸುಳಿವನ್ನು ಭೀಮಾನಾಯ್ಕ್ ನೀಡಿದ್ದಾರೆ. ಈ ಹಿಂದೆಯೂ ಹೇಳಿಕೆ ನೀಡಿದ್ದ ಅವರು ಹೊಸ ವರ್ಷದಲ್ಲಿ ಹಾಲು ಉತ್ಪಾದಕ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಳವಾಗಲಿದೆ ಎಂದು ಹೇಳಿದ್ದರು.
ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಕ ರೈತರಹಿತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದರು.