ಸಂಚಾರಿ ವಿಜಯ್ ಸ್ಥಿತಿ ಗಂಭೀರ

admin
0 Min Read

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ನಿನ್ನೆ ಸ್ನೇಹಿತರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಕೂಡಲೇ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a Comment