ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

Date:

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ಕಾಂಗ್ರೆಸ್ ಮಹಾ ದೋಖಾ ಮಾಡುತ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಜೆಡಿಎಸ್ ಹೋರಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಈ ಬಗ್ಗೆ ಟ್ವೀಟ್ ಮೂಲಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರುರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಶುಭೋದಯ ಬೆಂಗಳೂರು ! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಆದ್ರೆ ಇದರ ಬಗ್ಗೆ ಚಿಂತಿಸಬೇಡಿ, ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.
ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...