ಬಜೆಟ್ 2019 ಸಂಪೂರ್ಣ ದೃಷ್ಟಿಹೀನವಾಗಿದೆ. ಅದರ ಮೇಲೆ, ಅವರು ಸೆಸ್ ವಿಧಿಸಿರುವುದಷ್ಟೇ ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನೂ ವಿಧಿಸುವ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್’ಗೆ ಸುಮಾರು 2.50 ರೂ. ಮತ್ತು ಡೀಸೆಲ್‌ಗೆ ಪ್ರತಿ ಲೀಟರ್‌ಗೆ 2.30 ರೂ. ಹೆಚ್ಚಾಗಿದೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಪೆಟ್ರೋಲ್-ಡೀಸೆಲ್ ದರ ಹೆಚ್ಚಳದಿಂದಾಗಿ ಸಾರಿಗೆ-ಮಾರುಕಟ್ಟೆ-ಅಡಿಗೆಮನೆವರೆಗೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗಲಿದೆ.ಹೀಗಾಗಿ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಇದು ಚುನಾವಣಾ ಪ್ರಶಸ್ತಿ!!’ ಎಂದು ಟ್ವೀಟ್ ಮಾಡಿದ್ದಾರೆ.