ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ‘ಗಾಂಧಾರಿ’ ಹಾಗೂ ‘ರಾಧಾ ರಮಣ’ ಧಾರಾವಾಹಿಗಳ ಮೂಲಕ ಖ್ಯಾತಿ ಗಳಿಸಿದ್ದ ನಟಿ ಕಾವ್ಯಾ ಗೌಡ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ಸ್ವಲ್ಪ ದೂರ ಉಳಿದು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈ ನಡುವೆ ಅವರ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಟಿ ಕಾವ್ಯಾ ಗೌಡ ಅವರ ಜನಪ್ರಿಯತೆಯನ್ನು ಸಹಿಸದೇ ಈ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.ನಟಿ ಕಾವ್ಯಾ ಗೌಡ ಅವರು ಕೆಲವು ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ವಿವಾಹವಾಗಿದ್ದರು. ಸೋಮಶೇಖರ್ ಹಾಗೂ ನಂದೀಶ್ ಸಹೋದರರು. ಸೋಮಶೇಖರ್–ಕಾವ್ಯಾ ದಂಪತಿ ಮತ್ತು ನಂದೀಶ್–ಪ್ರೇಮಾ ದಂಪತಿ ಒಂದೇ ಮನೆಯಲ್ಲಿ ವಾಸವಿದ್ದರು. ಇತ್ತೀಚಿನ ದಿನಗಳಲ್ಲಿ ಕಾವ್ಯಾ ಮತ್ತು ಪ್ರೇಮಾ ನಡುವೆ ಮನಸ್ತಾಪ ಉಂಟಾಗುತ್ತಲೇ ಇದ್ದುದಾಗಿ ತಿಳಿದುಬಂದಿದೆ.ಇತ್ತೀಚೆಗೆ ಕಾವ್ಯಾ ಮತ್ತು ಪ್ರೇಮಾ ಅವರ ಸಂಬಂಧಿಕರು ಮನೆಗೆ ಆಗಮಿಸಿದ್ದ ವೇಳೆ ಮನೆಯೊಳಗೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಸಂಬಂಧಿ ರವಿಕುಮಾರ್ ಸೋಮಶೇಖರ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವಿದೆ. ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಲ್ಲದೆ, ನಟಿ ಕಾವ್ಯಾ ಗೌಡ ಅವರಿಗೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಕಾವ್ಯಾ ಮೇಲೆಯೂ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಸೋಮಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಾವ್ಯಾ ಗೌಡ ಅವರ ಅಕ್ಕ ಭವ್ಯಾ ಗೌಡ ಅವರು ಪ್ರೇಮಾ, ನಂದೀಶ್, ಪ್ರಿಯಾ ಹಾಗೂ ರವಿಕುಮಾರ್ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.‘ನಿನ್ನನ್ನು ರೇಪ್ ಮಾಡುತ್ತೇನೆ’ ಎಂದು ರವಿಕುಮಾರ್ ಕಾವ್ಯಾ ಗೌಡ ಅವರಿಗೆ ಬೆದರಿಕೆ ಹಾಕಿರುವುದರಿಂದ ಅವರು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕುಟುಂಬದ ಒಳಗಿನ ಕಲಹ ಬೀದಿಗೆ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ
Date:






