ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶ ಇಲ್ಲ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಹಿಂದೆಯೂ ಮುಸ್ಲಿಮರಿಗೆ 4% ಮೀಸಲಾತಿ ಇತ್ತು. ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶ ಇಲ್ಲ.
ಬೊಮ್ಮಾಯಿ ಸಿಎಂ ಇದ್ದಾಗ ಮುಸ್ಲಿಮರ ಮೀಸಲಾತಿ ಹಿಂದಕ್ಕೆ ಪಡೆಯಲಾಯಿತು. ಕಾಂಗ್ರೆಸ್ ನವ್ರು ಬಂದ ಮೇಲೆ ಮುಸ್ಲಿಮರಿಗೆ ಮೀಸಲಾತಿ ಕೊಡೋದಾಗಿ ಹೇಳಿದ್ರು. ಇದರ ಭಾಗವಾಗಿ ಈಗ ಗುತ್ತಿಗೆಯಲ್ಲೂ ಮೀಸಲಾತಿ ಕೊಡಲು ಮುಂದಾಗಿದ್ದಾರೆ. ಇದರ ವಿರುದ್ಧ ನಾವು ಸದನದ ಒಳಗೆ ಮತ್ತು ಹೊರಗೆ ಹೋರಾಡ ಮಾಡ್ತೇವೆ. ನಮ್ಮ ರಾಷ್ಟ್ರೀಯ ನಾಯಕರೂ ಇದು ದೇಶ ವಿರೋಧಿ ನಡೆ ಅಂದಿದ್ದಾರೆ. ಇದು ಓಲೈಕೆ ರಾಜಕಾರಣ, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ತಿಳಿಸಿದ್ದಾರೆ.