ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರೋ ಸಂದರ್ಭದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿರೋ ಬೆಂಕಿಯಿಂದಾಗಿ ( Fire breaks out inside Parliament ), ಕೊಠಡಿ ಹೊತ್ತಿ ಉರಿಯುತ್ತಿದೆ.
ಇಂದು ಬೆಳಿಗ್ಗೆ 8 ಗಂಟೆಯ ಹಾಗೇ ದೆಹಲಿಯ ಸಂಸತ್ ಭವನದ ಕೊಠಡಿ ಸಂಖ್ಯೆ 59ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ.
ಮತ್ತೊಂದೆಡೆ ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಯಿತು ಮತ್ತು ಡಿಸೆಂಬರ್ 23ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಅಗ್ನಿ ಅವಘಡ ಸಂಸತ್ ಭವನದಲ್ಲಿ ಉಂಟಾಗಿದೆ.