ಸಂಸದರಿಗೆ ಶಾಕ್ : ಬಂಗಲೆ ಖಾಲಿ‌ಮಾಡುವಂತೆ ನೋಟೀಸ್

Date:

ಲೋಕಸಭೆಯ 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ಈ ಮಾಹಿತಿ ನೀಡಿವೆ. ಸಾರ್ವಜನಿಕ ಆವರಣ (ಅನಧಿಕೃತ ಒತ್ತುವರಿ ತೆರವು) ಕಾಯ್ದೆಯಡಿ ಎಲ್ಲರಿಗೂ ಈ ನೋಟಿಸ್‌ಗಳನ್ನು ನೀಡಲಾಗಿದೆ.

ನಿಯಮಗಳ ಪ್ರಕಾರ, ಹಿಂದಿನ ಲೋಕಸಭೆ ವಿಸರ್ಜನೆಯಾದ ಒಂದು ತಿಂಗಳೊಳಗೆ ಮಾಜಿ ಸಂಸದರು ತಮ್ಮ ಸರ್ಕಾರಿ ಬಂಗಲೆಗಳನ್ನು ಖಾಲಿ ಮಾಡಬೇಕು. ಇದುವರೆಗೆ 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಬಂಗಲೆ ಒತ್ತುವರಿ ತೆರವು ನೋಟಿಸ್ ಜಾರಿ ಮಾಡಲಾಗಿದ್ದು, ಕೂಡಲೇ ಸರಕಾರಿ ಬಂಗಲೆಗಳನ್ನು ತೆರವು ಮಾಡುವಂತೆ ಸೂಚಿಸಲಾಗಿದೆ.

ಇದೇ ಸಮಯದಲ್ಲಿ ಇನ್ನು ಕೆಲವು ಮಾಜಿ ಸಂಸದರಿಗೆ ನೋಟಿಸ್ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಅವರು ತಮ್ಮ ಸರ್ಕಾರಿ ನಿವಾಸಗಳನ್ನು ಶೀಘ್ರದಲ್ಲೇ ಖಾಲಿ ಮಾಡದಿದ್ದರೆ, ಬಲವಂತವಾಗಿ ಹೊರಹಾಕಲು ಅಧಿಕಾರಿಗಳ ತಂಡಗಳನ್ನು ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...