ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ!

Date:

ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ!

 

ಚಿಕ್ಕಬಳ್ಳಾಪುರ: ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದಿದೆ. ಜಿಲ್ಲಾ ಪಂಚಾಯತ್‌ ಗುತ್ತಿಗೆ ಆಧಾರಿತ ಕಾರು ಚಾಲಕ ಎನ್. ಬಾಬು, ಆತ್ಮಹತ್ಯೆಗೆ ಶರಣಾಗಿದ್ದು, ಅವರು ಮುಖ್ಯ ಲೆಕ್ಕಾಧಿಕಾರಿಯ ವಾಹನದ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೇಣಿಗೆ ಶರಣಾಗಿರುವ ಚಾಲಕ ಬಾಬು ಸರ್ಕಾರಿ ಕೆಲಸ ಕೊಡಿಸುವ ಭರವಸೆಯೊಂದಿಗೆ 25 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ಡೆತ್​ನೋಟ್​​ನಲ್ಲಿ ಬಾಬು,  ನನಗೆ ವಂಚನೆಯಾಗಿದೆ, ಲಕ್ಷ ಲಕ್ಷ ಕಳೆದುಕೊಂಡಿದ್ದೇನೆ. ಈ ಕಾರಣಕ್ಕಾಗಿ ತನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಸಂಸದರ ಹೆಸರು ಮತ್ತು ಅವರ ಬೆಂಬಲಿಗರ ಹೆಸರುಗಳನ್ನು ಉಲ್ಲೇಖಿಸಿ ನನಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಈ ಘಟನೆಯ ಬಗ್ಗೆ ತಿಳಿದುಕೊಂಡ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ಇಳಿಸಿ, ತನಿಖೆಯನ್ನು ಆರಂಭಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...