ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ದಿನೇಶ್ ಗುಂಡೂರಾವ್

Date:

ಬೆಂಗಳೂರು: ಅಂಗಾಂಗ ದಾನವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿಯನ್ನು ನೀಡಿದ್ದು, ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನೀತಿಯನ್ನು ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ‘ಅಂಗಾಂಗ ದಾನ’ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳನ್ನು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗೂ ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಸರ್ಕಾರವು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...