No menu items!
11.1 C
Munich
Wednesday, April 29, 2026

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

Must read

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ಅವರು ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿÀ ಮಾತನಾಡಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಮುಖ್ಯಮಂತ್ರಿಗಳಿಗೆ ಅಧಿವೇಶನ ಆರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ಹೇಳಿದರು.
ಮುಖ್ಯಮಂತ್ರಿ ವಿಷಯದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು ಗಮನ ಸೆಳೆದರು. ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ಟೀಕಿಸಿದರು.

- Advertisement -spot_img

More articles

- Advertisement -spot_img

Latest article