No menu items!
9.8 C
Munich
Friday, May 15, 2026

ಸಚಿವ ಮಹದೇವಪ್ಪಗೆ ಶೂ ತೊಡಿಸಿದ ಅಂಗರಕ್ಷಕ..!

Must read

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.
ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು. ಹಾಸ್ಟೆಲ್‌ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು.

- Advertisement -spot_img

More articles

- Advertisement -spot_img

Latest article