ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಬಿ.ವೈ ವಿಜಯೇಂದ್ರ! ಭಾರೀ ಕುತೂಹಲ
ಬೆಂಗಳೂರು: ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ಭೇಟಿಯಾಗಿದ್ದಾರೆ. ರಾಜ್ಯದ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಅವರ ಈ ಬೇಟಿಯೂ ಭಾರೀ ಕುತೂಹಲ ಮೂಡಿಸುತ್ತಿದೆ. ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸದ್ದು ಮಾಡುತ್ತಿದ್ದಂತೆ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗಿದ್ದಾರೆ.
ಜತೆಗೆ ಈ ಭೇಟಿಯ ಸಮಯದಲ್ಲೇ ಜಾರಕಿಹೊಳಿ ಜೊತೆ ವಿಜಯೇಂದ್ರ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮನವಿ ಸ್ವೀಕಾರದ ಬಳಿಕ ನಿಮ್ಮ ಜೊತೆಗೆ ಮಾತುಕತೆ ನಡೆಸಬೇಕು ಬನ್ನಿ ಸರ್ ಎಂದು ವಿಜಯೇಂದ್ರ ಜಾರಕಿಹೊಳಿ ಅವರನ್ನು ಕರೆದಿದ್ದಾರೆ. ಬಿವೈವಿ ಕರೆದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.