ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ.!

Date:

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈ ಪ್ರಕರಣದ ತನಿಖೆ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಕಷ್ಟ.
ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿತ್ತು. ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...