ಸಚಿವ ಸ್ಥಾನಕ್ಕೆ ಸಚಿವ KN ರಾಜಣ್ಣ ರಾಜೀನಾಮೆ..!
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಎರಡನೇ ಸಚಿವರ ವಿಕೆಟ್ ಪತನವಾಗಿದೆ. ಈ ಮೊದಲು ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.
ಮತದಾರರ ಪಟ್ಟಿಯ ಲೋಪದೋಷಗಳ ಬಗ್ಗೆ ರಾಜಣ್ಣ ನೀಡಿದ ಹೇಳಿಕೆ ಪ್ರಮುಖವಾಗಿದೆ. ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದು, ಮತದಾರರ ಪಟ್ಟಿಯ ನಿರ್ವಹಣೆಯಲ್ಲಿ ತಪ್ಪು ನಡೆದಿದೆ ಎಂದು ಒಪ್ಪಿಕೊಂಡಿದ್ದರು.
“ವೋಟಿಂಗ್ ಲಿಸ್ಟ್ ನಮ್ಮ ಸರ್ಕಾರದ ಅವಧಿಯಲ್ಲಿ ತಯಾರಾಯಿತು. ಮತದಾರರ ಪಟ್ಟಿಯಲ್ಲಿ ಆಕ್ರಮ ನಡೆದಿರುವುದು ನಿಜ, ಅದರಲ್ಲಿ ಯಾವುದೇ ಅನುಮಾನ ಇಲ್ಲ. ಮಹದೇವಪುರ ಕ್ಷೇತ್ರದಲ್ಲೂ ನಮ್ಮ ಲೋಪ ಇದೆ,” ಎಂದು ರಾಜಣ್ಣ ಸ್ಪಷ್ಟಪಡಿಸಿದ್ದರು.