ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

Date:

ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.
68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

 


ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ; ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಚಿವರಾಗಿ ಸೇರ್ಪಡೆಗೊಳ್ಳಲಿದ್ದಾರೆ. ಡಿ. ವಿ. ಸದಾನಂದ ಗೌಡ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರ್ಪಡೆಗೊಳ್ಳುತ್ತಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿ ಮತ್ತು ರಾಜ್ಯಸಭಾ ಸದ್ಯರಾಗಿರುವ ರಾಜೀವ್ ಚಂದ್ರಶೇಖರ್ ಸಚಿವರಾಗಲಿದ್ದಾರೆ.
ಸಂಜೆ 6 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಸೇರಿದಂತೆ ಅನೇಕ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...