ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿಯ ಹಲವು ಹಿರಿಯ ಶಾಸಕರುಗಳು ಗೈರು ಹಾಜರಾಗಿದ್ದು, ಇದರ ಜೊತೆಗೆ ಬಾಲಚಂದ್ರ ಜಾರಕಿಹೊಳಿಯವರ ನಿವಾಸದಲ್ಲಿ ಕೆಲ ಶಾಸಕರುಗಳು ಸಭೆ ನಡೆಸಿರುವುದು ಮುಖ್ಯಮಂತ್ರಿ ಯಡಿಯೂರಪ್ಪನವರ ನೆಮ್ಮದಿ ಕೆಡಿಸಿದೆ ಎನ್ನಲಾಗುತಿದೆ.
ಹೀಗಾಗಿಯೇ ಸಭೆಯ ಮಾಹಿತಿ ತಿಳಿಯುತ್ತಿದ್ದಂತೆ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕರೆ ಮಾಡಿ ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಯಡಿಯೂರಪ್ಪನವರು ಸಮಾಧಾನಪಡಿಸಲು ಯತ್ನಿಸಿದರೂ ಅದಕ್ಕೆ ಬಾಲಚಂದ್ರ ಜಾರಕಿಹೊಳಿ ಜಗ್ಗಿಲ್ಲವೆಂದು ಹೇಳಲಾಗಿದೆ. ಮೇಲ್ನೋಟಕ್ಕೆ ಸಮಾಧಾನದ ಮಾತನಾಡುತ್ತಿದ್ದರೂ ಬಾಲಚಂದ್ರ ಜಾರಕಿಹೊಳಿ, ಒಳಗೊಳಗೆ ಕುದಿಯುತ್ತಿದ್ದಾರೆಂದು ಹೇಳಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.