ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಅಕ್ಷರಶಃ ಮುಗ್ಗರಿಸಿದೆ. ಇದುವರೆಗೂ 6 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಉಳಿದ 5 ಪಂದ್ಯಗಳಲ್ಲಿ ಸೋಲುಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಪದೇ ಪದೇ ಕಳಪೆ ಪ್ರದರ್ಶನ ತೋರಿ ಟೂರ್ನಿಯಲ್ಲಿ ಮುಗ್ಗರಿಸಿದ ಕಾರಣ ಸ್ವತಃ ಡೇವಿಡ್ ವಾರ್ನರ್ ಅವರೇ ನಾಯಕತ್ವವನ್ನು ತ್ಯಜಿಸಿದ್ದಾರೆ.
ಡೇವಿಡ್ ವಾರ್ನರ್ ಬದಲು ಇದೀಗ ಕೇನ್ ವಿಲಿಯಮ್ಸನ್ ಅವರಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವವನ್ನು ನೀಡಲಾಗಿದೆ. ನ್ಯೂಜಿಲೆಂಡ್ ತಂಡದ ನಾಯಕನಾಗಿರುವ ಕೇನ್ ವಿಲಿಯಮ್ಸನ್ ಅವರಿಗೆ ನಾಯಕತ್ವವನ್ನು ಕೊಟ್ಟಿದ್ದು ಒಳ್ಳೆಯ ಕೆಲಸ ಎಂದು ಕ್ರೀಡಾಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇನ್ ವಿಲಿಯಮ್ಸನ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕನನ್ನಾಗಿ ಮಾಡಿರುವ ಕುರಿತು ಸ್ವತಃ ಸನ್ ರೈಸರ್ಸ್ ಹೈದ್ರಾಬಾದ್ ಅಧಿಕೃತವಾಗಿ ಪ್ರಕಟಣೆಯನ್ನು ಹೊರಡಿಸಿದೆ.
ಹೊಸ ನಾಯಕನನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂದಿನ ಪಂದ್ಯಗಳಲ್ಲಿ ಯಾವ ರೀತಿಯ ಪ್ರದರ್ಶನವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕು. ನಾಯಕತ್ವದ ಜವಾಬ್ದಾರಿ ಜೊತೆ ಉತ್ತಮ ಬ್ಯಾಟಿಂಗ್ ಆಡಲು ಪರದಾಡುತ್ತಿದ್ದ ಡೇವಿಡ್ ವಾರ್ನರ್ ಇದೀಗ ಹೆಚ್ಚಿನ ಜವಾಬ್ದಾರಿ ಇಲ್ಲದೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಬಹುದಾಗಿದೆ.