ಸದ್ಯಕ್ಕೆ ಮುಗಿಯಲ್ಲ ವೀಕೆಂಡ್ ಕರ್ಫ್ಯೂ

0
33

ರಾಜ್ಯಾದ್ಯಂತ ಜನವರಿ 31ರ ವರೆಗೆ ವೀಕೆಂಡ್​ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳು

  • ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ನಿರ್ಧಾರ.
  • ಬಿಇಒ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
  • ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಬೇಕು.
  • ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.
  • ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಬೇಕು.

  • ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ.
  • ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್​ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸಬೇಕು.
  • ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ, ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸಬೇಕು.
  • ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ.

  • ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರ್​ಗಳನ್ನು ಪ್ರಾರಂಭಿಸಲು ಸೂಚನೆ.
  • ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ.
  • ಕೋವಿಡ್ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚನೆ.
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಬೇಕು.
  • ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
  • ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಬೇಕು.
  • ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು.

LEAVE A REPLY

Please enter your comment!
Please enter your name here