ಸಬ್ ರಿಜಿಸ್ಟರ್ ಕಚೇರಿ ಮೇಲೆ “ಲೋಕಾ” ದಾಳಿ
ನೆಲಮಂಗಲ: ಸಬ್ ರಿಜಿಸ್ಟರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆದು ಪರಿಶೀಲನೆ ಮಾಡಲಾಗುತ್ತಿದೆ.
ಇಲ್ಲಿ ಸಾಕಷ್ಟು ದೂರುಗಳು ಬಂದ ಹಿನ್ನೆಲೆ ನೆಲಮಂಗಲದ ಸಬ್ ರಿಜಿಸ್ಟರ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಅಧಿಕಾರಿಗಳ ಹಾಜರಾತಿ ಇನ್ನಿತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.
ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲೋಕಾ ಅಧಿಕಾರಿಗಳಿಂದ ತಪಾಸಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕ್ಯಾಬಿನ್ ಗಳ ತಪಾಸಣೆ ಮಾಡಲಾಗಿದೆ.
ಲೋಕಾ ಅಧಿಕಾರಿಗಳ ದಿಢೀರ್ ದಾಳಿಗೆ ಸಬ್ ರಿಜಿಸ್ಟರ್ ಕಚೇರಿ ಬೆಚ್ಚಿ ಬಿದ್ದಿದೆ.