No menu items!
11.1 C
Munich
Wednesday, April 29, 2026

ಸಮನ್ವಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Must read

ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ತಾಯಿ-ಮಗಳು ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸಮನ್ವಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಪ್ರಖ್ಯಾತಿ ಪಡೆದಿದ್ದರು. ಆ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಮೃತಪಟ್ಟ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಚತೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಲಾರಿ ಚಾಲಕ ಮಂಚೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟರ್‌ ನಲ್ಲಿ ಅಮೃತಾ ಮತ್ತು ಸಮನ್ವಿ ಒಟ್ಟಿಗೆ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್‌ ಗೆ ಗುದ್ದಿದ ಪರಿಣಾಮ ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article