ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು !

Date:

ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...