No menu items!
19.4 C
Munich
Friday, May 1, 2026

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Must read

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

- Advertisement -spot_img

More articles

- Advertisement -spot_img

Latest article