ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು. ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...