No menu items!
28.1 C
Munich
Thursday, June 18, 2026

ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು !

Must read

ಉಡುಪಿ: ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು. ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು.
ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇನ್ನೂ ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದರು.

- Advertisement -spot_img

More articles

- Advertisement -spot_img

Latest article