ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

Date:

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಕೊಪ್ಪಳ : ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ.
ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...