ಸಮ್ಮಿಶ್ರ ಸರ್ಕಾರ ಬಂದಾಗ ರಾಮುಲು ಅವರನ್ನು ನಾನೇ ಮಂತ್ರಿ ಮಾಡಿಸಿದ್ದು: ಜನಾರ್ದನ ರೆಡ್ಡಿ
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಂದಾಗ ರಾಮುಲು ಅವರನ್ನು ನಾನೇ ಮಂತ್ರಿ ಮಾಡಿಸಿದ್ದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮಾತಿನಂತೆ ರಾಮುಲು ರಾಜಕೀಯಕ್ಕೆ ಬಂದರು. 1999 ರಲ್ಲಿ ಯಡಿಯೂರಪ್ಪ ಹಾಗೂ ಸುಷ್ಮಾ ಸ್ವರಾಜ್ ಭೇಟಿ ಮಾಡಿಸಿ ಶಾಸಕ ಕ್ಷೇತ್ರಕ್ಕೆ ಟಿಕೆಟ್ ಕೊಡಿಸಿದೆ.
ಆಗ ರಾಮುಲು ಬಿಎಸ್ ಯಡಿಯೂರಪ್ಪನವರ ಮುಂದೆ ಕಣ್ಣೀರು ಹಾಕಿದ್ದರು.ಆ ಚುನಾವಣೆಯಲ್ಲಿ ರಾಮುಲು ಸೋತರೂ ಬಿಜೆಪಿಯಲ್ಲಿ ಅವರು ಬೆಳೆದರು. ನಮ್ಮಿಬ್ಬರ ಸ್ನೇಹ ರಾಜಕೀಯ ಮೀರಿದ್ದು. ನಂತರ ಸಮ್ಮಿಶ್ರ ಸರ್ಕಾರ ಬಂದಾಗ ರಾಮುಲು ಅವರನ್ನು ನಾನು ಮಂತ್ರಿ ಮಾಡಿಸಿದ್ದೆ ಎಂದು ತಿಳಿಸಿದರು.
ಇನ್ನೂ ಬಂಗಾರು ಹನುಮಂತುಗೆ ಸಂಡೂರು ಉಪಚುನಾವಣೆಯ ಟಿಕೆಟ್ ನಾನು ಕೊಡಿಸಲಿಲ್ಲ. ಪಕ್ಷ ಅವರಿಗೆ ಟಿಕೆಟ್ ನೀಡಿತ್ತು. ನನಗೆ ಕೆಲಸ ಮಾಡಲು ಪಕ್ಷ ಆದೇಶ ಮಾಡಿತ್ತು. ನಮ್ಮ ಪಕ್ಷದ ಎಲ್ಲ ನಾಯಕರು ಬಂದು ಸಂಡೂರಲ್ಲಿ ಪ್ರಚಾರ ಮಾಡಿದ್ದರು. ಆದರೆ ರಾಮುಲು ಮೂರು ದಿನ ತಡವಾಗಿ ಪ್ರಚಾರಕ್ಕೆ ಬಂದಿದ್ದರು. ಅವರ ಜತೆಗೂ ನಾನು ಕೆಲಸ ಮಾಡಿ ಪ್ರಚಾರ ಮಾಡಿದೆ. ಆದರೆ ಬಿಜೆಪಿ ಅಭ್ಯರ್ಥಿ ಸೋಲುವ ಪರಿಸ್ಥಿತಿ ಬಂತು ಎಂದು ತಿಳಿಸಿದರು.