ಸರಣಿ ಅಪಘಾತ: ಏರ್‌ಪೋರ್ಟ್ ರಸ್ತೆಯಲ್ಲಿ 3 ಕಾರುಗಳ ನಡುವೆ ಡಿಕ್ಕಿ! ತಪ್ಪಿದ ಅನಾಹುತ!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. 3 ಕಾರುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದ ಪರಿಣಾಮ ಟ್ರಾಫಿಕ್ ಜಾಮ್ ಪವನ್ ಉಂಟಾಗಿ ಮೂರರಿಂದ ನಾಲ್ಕು ಕಿ.ಮೀವರೆಗೆ ವಾಹನಗಳು ರಸ್ತೆಯಲ್ಲೇ ನಿಂತಿವೆ. ಸದ್ಯ ಸಂಚಾರಿ ಪೊಲೀಸರು ಅಪಘಾತವಾಗಿರುವ ವಾಹನಗಳನ್ನು ಕ್ಲಿಯರ್ ಮಾಡುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಲ್ಲಿ ನಿರತರಾಗಿದ್ದಾರೆ.