ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯದಾದ್ಯಂತ ಭಾರಿ ವಿರೋಧ ವೆಕ್ತವಾಗುತ್ತಿದೆ ಹಾಗೆ ಕನಕಪುರದಲ್ಲಿಯೂ ಸಹ ವಿರೋಧಿಸಿ ಪ್ರತಿಭಟನೆ ನೆದೆಸಿದರು ಆ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್ ಅವರು ಕೀಡ ಭಾಗಿಯಾಗಿದ್ದರು ಆ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ಪೌರತ್ವವನ್ನು ಸಾಬೀತುಪಡಿಸಲು ಹೇಳಿದರೆ ಕೇಂದ್ರ ಸರ್ಕಾರಕ್ಕೆ ನಾನು ಯಾವುದೇ ದಾಖಲೆ ಕೊಡುವುದಿಲ್ಲ. ಬೇಕಾದರೆ ಸರ್ಕಾರ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ತಪ್ಪು ನಿರ್ಧಾರಗಳ ವಿರುದ್ಧ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿಯ ಅವನತಿ ಆರಂಭವಾದಂತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.