ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ: ಆರ್.ಅಶೋಕ್
ಬೆಂಗಳೂರು: ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು.
ಆದರೆ, ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೇ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ.
ಜನರಲ್ಲಿ ವಿಶ್ವಾಸ ಹೊರಟುಹೋಗಿದೆ ಎಂದರು. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.